ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!

ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!

ಮುಂಡಗೋಡ ತಾಲೂಕಿನ ಗಡಿಭಾಗ, ತಡಸ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ಚಿರತೆ ಪ್ರತ್ಯಕ್ಷವಾಗಿದೆ. ರಾಜಾರೋಷವಾಗಿ ರಸ್ತೆಯ ಬದಿಯ ಕಾಡಲ್ಲಿ ಕುಳಿತಿರೋ ಚಿರತೆ ಕಂಡು ಜನ ಅಚ್ಚರಿಗೊಂಡಿದ್ದಾರೆ. ಚಿರತೆ ಕಾಣಿಸುತ್ತಿದ್ದಂತೆ ತಮ್ಮ ಮೊಬೈಲ್ ನಲ್ಲಿ ಚಿರತೆಯ ದೃಷ್ಯ ಸೆರೆಹಿಡಿದಿದ್ದಾರೆ. ಅಂದಹಾಗೆ, ಮುಂಡಗೋಡ ಹಾಗೂ ಹಾವೇರಿ ಜಿಲ್ಲೆಯ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು, ಮುಂಡಗೋಡಿನ ವಿಠ್ಠಲ್ ಬಾಳಂಬೀಡ ಹಾಗೂ ಗುಡ್ಡಪ್ಪ ಕಾತೂರ್ ಚಿರತೆ ಕಣ್ಣಿಗೆ ಬೀಳುತ್ತಿದ್ದಂತೆ, ತಮ್ಮ ಮೊಬೈಲ್ ನಲ್ಲಿ ದೃಷ್ಯ ಸೆರೆ ಹಿಡಿದಿದ್ದಾರೆ. ಅಲ್ಲದೆ ಈ ಭಾಗದಲ್ಲಿ ಸಂಚರಿಸುವಾಗ ಜಾಗ್ರತೆ ಇರಲಿ ಅಂತಾ ಎಚ್ಚರಿಸಿದ್ದಾರೆ.

ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!

ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!

Forest Smugglers; ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬಾಳೆಕೊಪ್ಪ (ಕರ್ಕಲ ಜಡ್ಡಿ) ಹತ್ತಿರ ಎರಡು ಬೈಕ್ ನಲ್ಲಿ ಜಿಂಕೆ ಚರ್ಮ ಹಾಗೂ ಕಾಡು ಹಂದಿಯ ಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಹೆಡೆಮುರಿ‌ಕಟ್ಟಿದ್ದಾರೆ. ಬಾಳೆಕೊಪ್ಪದ ಕನಕಪ್ಪ ದುರ್ಗಪ್ಪ ಮಾದರ್, ಪರಶುರಾಮ್ ಕನಕಪ್ಪ ಮಾದರ್, ಸೊರಬ ತಾಲೂಕು ಕೋಡಿಕೊಪ್ಪದ ಸುರೇಶ ಬಿನ್ ದೇವಪ್ಪ, ಉಮೇಶ್ ಬಿನ್ ಗುಡ್ಡಪ್ಪ, ಶಿವಪುತ್ರಪ್ಪ ಬಿನ್ ಹನುಮಂತಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಎರಡು ಬೈಕ್, ಒಂದು ಜಿಂಕೆ ಚರ್ಮ, 3.9 ಕೆಜಿ ಕಾಡುಹಂದಿಯ ಮಾಂಸ ವಶಪಡಿಸಿಕೊಳ್ಳಲಾಗಿದೆ.

ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!

ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!

GOA FIRE ACCIDENT; ಪಣಜಿ (ಗೋವಾ): ಉತ್ತರ ಗೋವಾದ ನೈಟ್‌ಕ್ಲಬ್‌ನಲ್ಲಿ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಪ್ರವಾಸಿಗರು ಸೇರಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್‌ಪಿಜಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿರುವ ಬಿರ್ಚ್​ ಬೈ ರೋಮಿಯೋ ಲೇನ್ ಕ್ಲಬ್​ನಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಿಂದ ಕ್ಲಬ್‌ ಸಂಪೂರ್ಣ ಬೆಂಕಿ ಹೊತ್ತಿ ಉರಿದಿದೆ. ಗೋವಾ ಪೊಲೀಸರ ಹೇಳಿಕೆ ಪ್ರಕಾರ, ಉತ್ತರ ಗೋವಾದ ಅರ್ಪೋರಾದ ಬಿರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 25 ಜನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ಪ್ರವಾಸಿಗರು, 14 ಮಂದಿ ಸಿಬ್ಬಂದಿ ಸೇರಿದ್ದು, ಏಳು ಜನರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಲ್ಲದೆ, ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಬೆಂಕಿಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಯಿಂದ ತನಿಖೆ ಪ್ರಗತಿಯಲ್ಲಿದೆ. ಕಾನೂನು...

ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

 FIRE ACCIDENT; ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಖಾದರಲಿಂಗ ದೇವಸ್ಥಾನದ ಸಮೀಪ ಪರ್ನಿಚರ್ ತಯಾರಿಸುವ ಅಡ್ಡೆಗೆ ಬೆಂಕಿ ತಗುಲಿ‌ ಭಾರೀ ಅನಾಹುತವಾಗಿದೆ. ಬೆಳಿಗ್ಗೆ ಸುಮಾರು 4 ಗಂಟೆಯಷ್ಟೊತ್ತಿಗೆ ಬೆಂಕಿ ತಗುಲಿದ್ದು ಇಡೀ ಕಟ್ಟಿಗೆಯ ಅಡ್ಡೆಯೇ ಸುಟ್ಟು ಕರಕಲಾಗಿದೆ. ಮಹ್ಮದ್ ಯೂನುಸ್ ಹೊಸಕೊಪ್ಪ ಎಂಬುವವರಿಗೆ ಸೇರಿದ ಪರ್ನಿಚರ್ ಅಡ್ಡೆ ಇದಾಗಿದ್ದು, ಬೆಂಕಿ ಅನಾಹುತದಲ್ಲಿ ಏನಿಲ್ಲವೆಂದರೂ ಅಂದಾಜು 50 ಲಕ್ಷ ಮೌಲ್ಯದ ಬೆಲೆಬಾಳುವ ಪರ್ನಿಚರಗಳು, ಕಟ್ಟಿಗೆಗಳು, ಮಷಿನ್ ಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಬೆಂಕಿ ಹೇಗೆ ತಗುಲಿದೆ ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಆದ್ರೆ ಅಷ್ಟೊತ್ತಿಗಾಗಲೇ ಬೆಂಕಿಯ ರೌದ್ರವಾತಾರ ಇಡೀ ಅಡ್ಡೆಯನ್ನೇ ಸುಟ್ಟು ಭಸ್ಮ ಮಾಡಿತ್ತು ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!

ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!

Transfer of Sirsi AC; ಶಿರಸಿ ಉಪವಿಭಾಗಾಧಿಕಾರಿ ಕಾವ್ಯಾರಾಣಿಯವರನ್ಜು ಸರ್ಕಾರ ವಾರ್ಗಾವಣೆ ಮಾಡಿದೆ. ಅಸಲು, ಕಾವ್ಯಾರಾಣಿಯವರು ಬಂದು ಇನ್ನೂ ಎರಡು ವರ್ಷವಾಗಿಲ್ಲ, ಅವಧಿಗೂ ಮುಂಚೆಯ ಏಕಾಏಕಿ ವರ್ಗಾವಣೆ ಮಾಡಿರೋದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ‌. ಮುಂಡಗೋಡಿನ ಬಂಜಾರಾ ಸಮಾಜದ ಮುಖಂಡ ಹಾಗೂ ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಎಸಿಯವರ ವರ್ಗಾವಣೆಯನ್ನು ಖಂಡಿಸಿದ್ದಾರೆ. ಶಿರಸಿ ವಿಭಾಗದಲ್ಲಿ ಎಸಿ ಕಾವ್ಯಾರಾಣಿಯವರು ಒಳ್ಳೆಯ ಕೆಲಸ ಮಾಡುತ್ತಿದ್ದರು. ಹಿಂದುಳಿದವರ, ಬಡವರ ಪರವಾಗಿ ಸಾಲಷ್ಟು ಕೆಲಸ ಮಾಡುತ್ತಿದ್ದರು. ಅದೇಷ್ಟೇ ಹೊತ್ತಿನಲ್ಲಿ ಸಮಸ್ಯೆ ಹೊತ್ತು ಹೋದ್ರೂ ತಕ್ಷಣವೇ ಸೂಕ್ತವಾಗಿ ಸ್ಪಂಧಿಸುತ್ತಿದ್ದರು. ಆದ್ರೆ ಇಂತಹ ಅಧಿಕಾರಿಯನ್ನು ಏಕಾಏಕಿ ವರ್ಗಾವಣೆ ಮಾಡಿದ್ದು ನಮಗೆ ನೋವಾಗಿದೆ. ಇದು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಗಳೊಗೆ ಬೆಲೆಯೇ ಇಲ್ಲದಂತಹ ಪರಿಸ್ಥಿತಿಯಾಗಿದ್ದು, ತಕ್ಷಣವೇ ಎಸಿ ಕಾವ್ಯಾರಾಣಿಯವರ ವರ್ಗಾವಣೆ ಆದೇಶ ರದ್ದು ಮಾಡಬೇಕು ಅಂತಾ ಶೇಖರ್‌ ಲಮಾಣಿ ಆಗ್ರಹಿಸಿದ್ದಾರೆ.

ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!

ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!

Accused Escaped; ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅದೇನಾಗಿದೆಯೋ ಒಂದೂ ಅರ್ಥ ಆಗ್ತಿಲ್ಲ. ಶ್ರೀಗಂಧ ಸಿಕ್ಕ ಪ್ರಕರಣದಲ್ಲಿ ಆರೋಪಿಯಾಗಿದ್ದವ ಖುದ್ದಾಗಿ ಕಚೇರಿಗೆ ಬಂದರೂ ಆತನನ್ನು ವಶಕ್ಕೆ‌ ಪಡೆಯದೇ ಉಧಾರತೆ ತೋರಿದ್ದಾರೆ. ಹೀಗಾಗಿ, ಆತ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇದೇಲ್ಲ ಖುದ್ದು ಮುಂಡಗೋಡ RFO ಸಾಹೇಬರ ಕಣ್ಗಾವಲಿನಲ್ಲೇ ನಡೆದು ಹೋಗಿದೆ ಅನ್ನೋದು ಕಂಡವರ ಆರೋಪ. ಹೀಗಾಗಿ, ಈ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನ ಜನ ಅಡಿಕೆ ಎಲೆ ತಿಂದು‌.. ಛೀ.. ಅಂತಿದಾರೆ…! ಅಗಡಿಯಲ್ಲಿ ನಡೆದದ್ದು..! ಅಸಲಿಗೆ, ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಮಂಗಳವಾರ ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಲಕ್ಷಾಂತರ ಬೆಲೆ ಬಾಳುವ ಸುಮಾರು 60 ಕೆಜಿಗೂ ಹೆಚ್ಚು ಶ್ರೀಗಂಧದ ತುಂಡುಗಳನ್ನು ಜಪ್ತಿ ಮಾಡಲಾಗಿತ್ತು. ಅಲ್ಲದೇ ಇದೇ ವೇಳೆ ಆರೋಪಿ ಅಲ್ಲಿ ದಾಳಿ ನಡೆಸಿದ ಕ್ಷಣದಲ್ಲೇ ಕಬ್ಬಿನ ಗದ್ದೆಯಲ್ಲಿ ಹೋಗಿ ನಾಪತ್ತೆಯಾಗಿದ್ದ. ಬೆನ್ನತ್ತಿ ತಡಕಾಡಿದ್ರೂ ಆತ ಸಿಕ್ಕಿರಲೇ ಇಲ್ಲ. ಹೀಗಾಗಿ, ವಶಪಡಿಸಿಕೊಂಡಿದ್ದ ಶ್ರೀಗಂಧದ ತುಂಡುಗಳೊಂದಿಗೆ ಅರಣ್ಯ ಅಧಿಕಾರಿಗಳು ಬರೀಗೈಯಲ್ಲಿ ವಾಪಸ್...

ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

 Forest Officials Raid; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯಾಧಿಕಾರಿಗಳ ಭರ್ಜರಿ ದಾಳಿ ನಡೆದಿದೆ‌. ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಸುಮಾರು 60 ಕೇಜಿ ಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿದರೂ ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದ್ದಾನೆ. ಅಂದಹಾಗೆ, ಅಗಡಿಯ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಬರೋಬ್ಬರಿ ನಾಲ್ಕು ಚೀಲಗಳಲ್ಲಿ ಭರ್ತಿ ಮಾಡಿ ಇಟ್ಟಿದ್ದ ಶ್ರೀಗಂಧದ ಮರದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ‌. ಇದೇಲ್ಲದ ಅಂದಾಜು ತೂಕ 60 ಕೇಜಿಗೂ ಹೆಚ್ಚು ಅಂತಾ ಅಂದಾಜಿಸಲಾಗಿದೆ. ಮೌಲ್ಯ ಇನ್ನೂ ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಷ್ಟಕ್ಕೂ ಗ್ಯಾಂಗ್ ಇದೆಯಾ..? ಅಸಲು, ಮುಂಡಗೋಡ ಪಟ್ಟಣ, ತಾಲೂಕಿನ ಅತ್ತಿವೇರಿ ಸೇರಿದಂತೆ ಹಲವು ಕಡೆ ಇತ್ತಿಚೆಗೆ ಶ್ರೀಗಂಧದ ಮರಗಳ್ಳತನ ಪ್ರಕರಣ ನಡೆದಿವೆ. ನಡೆಯುತ್ತಲೇ ಇವೆ. ಹಾಗಿದ್ರೆ, ಆ ಪ್ರಕರಣಗಳಿಗೂ ಇಲ್ಲಿ...

ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

Teacher Suspended; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ ಎ. ಅಮಾನತ್ತುಗೊಂಡಿದ್ದಾರೆ. ಶಿರಸಿ ಡಿಡಿಪಿಐ ಅಮಾನತ್ತು ಆದೇಶ ಹೊರಡಿಸಿದ್ದು, ಈ‌ ಶಿಕ್ಷಕನ ವಿರುದ್ಧ ಕರ್ತವ್ಯ ಲೋಪ ಆರೋಪದಡಿ ಅಮಾನತ್ತು ಮಾಡಲಾಗಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ಚಿಗಳ್ಳಿಯ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕರಾಗಿದ್ದ ದಾಸಪ್ಪ ವಿರುದ್ಧ ಇಲ್ಲಿನ ಮಹಿಳಾ ಶಿಕ್ಷಕಿಯರು ಮಹಿಳಾ ದೌರ್ಜನ್ಯದ ಕೇಸ್ ದಾಖಲಿಸಿದ್ದರು. ಹಾಗೂ SDMC ಅಧ್ಯಕ್ಷ ಸಂತೋಷ ಆಲದಕಟ್ಟಿ ಎಂಬುವವರು ಕೊಲೆ ಬೆದರಿಕೆಯ ಕೇಸು ದಾಖಲಿಸಿದ್ದರು‌. ಅಲ್ಲದೇ ಗ್ರಾಮಸ್ಥರು ಈ ಶಿಕ್ಷಕನ ವಿರುದ್ಧ ಪ್ರತಿಭಟನೆ ಕೂಡ ನಡೆಸಿದ್ದರು. ಅಲ್ಲದೇ ಹಲವು ಆರೋಪಗಳನ್ನು ಇವರ ವಿರುದ್ಧ ಮಾಡಿದ್ದರು. ಹೀಗಾಗಿ, ಸಾಕಷ್ಟು ಆರೋಪಗಳು ಬಂದ ಹಿನ್ನೆಲೆಯಲ್ಲಿ ಡಿಡಿಪಿಐ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಪ್ರಮುಖ ಸುದ್ದಿ👉 ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!

ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!

ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!

Student Admitted; ಮುಂಡಗೋಡ ಪಟ್ಟಣದ ಮಾದರಿ ಶಾಲೆಯ ಸುಮಾರು 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾಲೂಕಾಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿಯೂಟದಲ್ಲಿ ಇಲಿಯ ಹಿಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಊಟ ಸೇವಿಸಿದ ಸುಮಾರು 4 ನೂರು ವಿದ್ಯಾರ್ಥಿಗಳ ಪೈಕಿ 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಚಿಕಿತ್ಸೆಗೆ ದಾಖಲಾಗಿದ್ದಾರೆ. ಎಂದಿನಂತೆ ಶುಕ್ರವಾರ ಮದ್ಯಾನ್ಹ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದಾರೆ. ಊಟದ ವೇಳೆ ಇಲಿಯ ಹಿಕ್ಕೆ ಊಟದಲ್ಲಿ ಕಂಡು ಬಂದಿದೆ. ಹೀಗಾಗಿ, ಅದನ್ನು ಸೇವಿಸಿದ ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಹೀಗಾಗಿ ತಕ್ಷಣವೇ ತಾಲೂಕಾಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಧಿಕಾರಿಗಳ ಭೇಟಿ..! ಮುಂಡಗೋಡ ಪಿಐ ರಂಗನಾಥ್ ಸೇರಿ ಹಲವು ಅಧಿಕಾರಿಗಳ ತಂಡ ತಾಲೂಕಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇನ್ನು ತಾಲೂಕಾಸ್ಪತ್ರೆಯ ವೈದ್ಯರ ತಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿದೆ. ಪಾಲಕರ ಆಕ್ರೋಶ..! ತಮ್ಮ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತಾಲೂಕಾಸ್ಪತ್ರೆಗೆ ಧಾವಿಸಿದ ವಿದ್ಯಾರ್ಥಿಗಳ ಪೋಷಕರು ಮಾದರಿ ಶಾಲೆಯ ಶಿಕ್ಷಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಶಾಲೆತ ಶಿಕ್ಷಕರೇ...

ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!

ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!

Crime News; ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಗ್ರಾಮದ ಹೊರಭಾಗದಲ್ಲಿರುವ ಸಣ್ಣ ಬಾವಿಯೊಂದರಲ್ಲಿ ಓರ್ವ ವ್ಯಕ್ತಿಯ ಶವ ತೇಲುತ್ತಿರುವ ಬಗ್ಗೆ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಆ ಶವವನ್ನು ಹೊರ ತೆಗೆಯುತ್ತಿದ್ದಂತೆಯೇ ಮತ್ತೊಂದು ಶವ ಪತ್ತೆಯಾಗಿದೆ. ಅದನ್ನೂ ತೆಗೆಯುತ್ತಲೇ ಶಾಲಾ ಸಮವಸ್ತ್ರದಲ್ಲಿರುವ ಎರಡು ಮಕ್ಕಳ ಶವಗಳು ಕೂಡ ತೇಲಿ ಬಂದಿವೆ. ಬಾವಿಯ ಬಳಿ ನಿಲ್ಲಿಸಲಾಗಿದ್ದ ಬೈಕ್ ಆಧಾರದ ಮೇಲೆ ಇದು ನಾರಾಯಣ ಶಿಂಧೆ...

error: Content is protected !!